×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ಟಿಎಂಸಿ ಯತ್ನ: ಅಧಿರ್ ರಂಜನ್ ಚೌಧರಿ ಟೀಕೆ

Last Updated 21 ಜನವರಿ 2022, 2:23 IST
Comments
ಅಕ್ಷರ ಗಾತ್ರ

ಕೋಲ್ಕತ್ತ: ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಟೀಕಿಸಿದ್ದಾರೆ.

ಕೇಸರಿ ಪಕ್ಷದ ವಿರುದ್ಧ ಒಗ್ಗಟ್ಟು ಮೂಡಿಸುತ್ತಿರುವುದಾಗಿ ಟಿಎಂಸಿ ಹೇಳುತ್ತಿರುವುದು ಕೇವಲ ನಾಟಕ. ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ ಅನ್ನು ಮುಗಿಸಲು ಯತ್ನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ಗೋವಾ ಚುನಾವಣೆಗೆ ಟಿಎಂಸಿಯು ಇತ್ತೀಚೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಗೋವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ‘ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷದ (ಎಂಜಿಪಿ) ಜತೆ ಮೈತ್ರಿ ಮಾಡಿಕೊಂಡಿದೆ.

‘ಬಿಜೆಪಿಯೇತರ ಮತಗಳನ್ನು ವಿಭಜಿಸುವುದು ಟಿಎಂಸಿಯ ಮುಖ್ಯ ಪಾತ್ರವಾಗಿದೆ. ಟಿಎಂಸಿಯು ಹಣಬಲ ಉಪಯೋಗಿಸಿಕೊಂಡು ಕೆಲವು ನಾಯಕರನ್ನು ಕರೆತಂದಿದೆ. ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ಗೆ ತೊಂದರೆ ಉಂಟುಮಾಡಲು ಯತ್ನಿಸುತ್ತಿದೆ. ಇದು ಸಾಬೀತಾಗಿರುವ ಸತ್ಯ’ ಎಂದು ಚೌಧರಿ ಹೇಳಿದ್ದಾರೆ.

‘ಬಿಜೆಪಿಯ ಪ್ರಮುಖ ಪ್ರತಿಪಕ್ಷವಾಗಿ ಕಾಂಗ್ರೆಸ್ ಇರುವ ರಾಜ್ಯಗಳಲ್ಲೇ ಟಿಎಂಸಿ ಈ ರೀತಿ ಮಾಡುತ್ತಿದೆ. ಇತರ ಪ್ರಾದೇಶಿಕ ಶಕ್ತಿಗಳು ಇರುವುದರಿಂದ ಉತ್ತರ ಪ್ರದೇಶದಂಥ ರಾಜ್ಯಗಳಲ್ಲಿ ಸ್ಪರ್ಧಿಸುತ್ತಿಲ್ಲ’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ವಿರುದ್ಧದ ಮತಗಳನ್ನು ಒಡೆಯಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಟೀಕಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT