ಗೋರಖ್‌ಪುರ್: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಗೋರಖ್‌ಪುರ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ಕಲ್ಪಿಸಿರುವುದಕ್ಕೆ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರ ಶ್ರಮದಿಂದ ಎಲ್ಲ ಕ್ಷೇತ್ರದಲ್ಲೂ ಜಯಗಳಿಸಿ ಮತ್ತೆ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.

ಗೋರಖ್‌ಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಚಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆ 2022: ಅಯೋಧ್ಯೆ, ಮಥುರಾ ಬಿಜೆಪಿಗೆ ಸುರಕ್ಷಿತವಲ್ಲ

ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಜನರಿಗೆ ಗೊತ್ತಿದೆ. ಅಭಿವೃದ್ಧಿ ಮತ್ತು ಆಡಳಿತವನ್ನು ಜನರು ನೋಡಿದ್ದಾರೆ. ಹೀಗಾಗಿ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಿಎಂ ಯೋಗಿ ಹೇಳಿದ್ದಾರೆ.

ಅಯೋಧ್ಯೆಯಿಂದ ಸ್ಪರ್ಧಿಸದ ಯೋಗಿ ಆದಿತ್ಯನಾಥ್, 'ಭದ್ರಕೋಟೆ'ಯಲ್ಲೇ ಕಣಕ್ಕೆ

ಉತ್ತರ ಪ್ರದೇಶ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.