ಮುಂಬೈ: ಸೆಲೆಬ್ರಿಟಿಗಳನ್ನು ಬಂಧಿಸುವುದು ಮತ್ತು ಅವರೊಂದಿಗೆ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುವುದಕ್ಕಾಗಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.

ಮುಂಬೈನ ಶಣ್ಮುಖಾನಂದ ಸಭಾಂಗಣದಲ್ಲಿ ನಡೆದ ದಸರಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ʼಇದು (ಮಾದಕವಸ್ತು ವಶ) ಮಹಾರಾಷ್ಟ್ರದಲ್ಲಿ ಮಾತ್ರವೇ ನಡೆಯುತ್ತಿದೆ. ಮುಂದ್ರಾ ಬಂದರಿನಲ್ಲಿ ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ರಾಜ್ಯ ಪೊಲೀಸರು ಸುಮಾರು ₹ 150 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಆದರೆ, ಸೆಲೆಬ್ರಿಟಿಗಳನ್ನು ಮಾತ್ರವೇ ಬಂಧಿಸಲಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿರುವ ಮುಂದ್ರಾ ಬಂದರು ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಮಾದಕ ವಸ್ತುಗಳ ನಿಯಂತ್ರಣ ದಳವು (ಎನ್‌ಸಿಬಿ) ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅನ್ನು ಬಂಧಿಸಿರುವ ಬಗ್ಗೆ ಠಾಕ್ರೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದುವರಿದು, ಕೇಂದ್ರವು ರಾಜ್ಯದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದೂ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್, ಗಾಂಧಿ ಇಬ್ಬರನ್ನೂ ಬಿಜೆಪಿ ಅರ್ಥ ಮಾಡಿಕೊಂಡಿಲ್ಲ: ಉದ್ಧವ್ ಠಾಕ್ರೆ

ʼಸದ್ಯದ ಸ್ಥಿತಿಯಲ್ಲಿ, ರಾಜ್ಯಗಳ ಕಾರ್ಯಾಚರಣೆಗೆ ಕೇಂದ್ರವು ಅವಕಾಶ ಮಾಡಿಕೊಡುತ್ತದೆಯೇ ಎಂಬ ಪ್ರಶ್ನೆ ಮೂಡುತ್ತದೆ. ತಮ್ಮ ಅಧಿಕಾರ ದಾಹದಿಂದಾಗಿ ಅವರು (ಕೇಂದ್ರ) ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ಸತಾಯಿಸುತ್ತಲೇ ಇದ್ದಾರೆ. ಸರ್ಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದ್ದಾರೆ. ಕೇಂದ್ರವು ರಾಜ್ಯದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಿದರೆ ಅದು ಅಸಂವಿಧಾನಿಕ ಎಂದು ಸಂವಿಧಾನ ಹೇಳುತ್ತದೆʼ ಎಂದು ಹೇಳಿದ್ದಾರೆ.

ಬಿಜೆಪಿಯು ಅಧಿಕಾರಕ್ಕೇರಲು ಏಣಿಯಂತೆ ಬಳಸಿಕೊಳ್ಳುತ್ತಿರುವುದರಿಂದ ಹಿಂದುತ್ವವು ಅಪಾಯದಲ್ಲಿದೆ ಎಂದೂ ಕಳವಳ ವ್ಯಕ್ತಪಡಿಸಿದ್ದಾರೆ.

ಸೆಲೆಬ್ರಿಟಿಗಳನ್ನು ಬಂಧಿಸುವುದು ಮತ್ತು ಅವರೊಂದಿಗೆ ಚಿತ್ರಗಳನ್ನು ಕ್ಲಿಕ್ಕಿಸಿಕೊಳ್ಳುವುದಕ್ಕಾಗಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.