×
ADVERTISEMENT
ಈ ಕ್ಷಣ :
ADVERTISEMENT

ಠಾಣೆ ಎದುರು ಡಿಸಿಪಿಗೆ ನಿಂದನೆ

Published : 18 ಅಕ್ಟೋಬರ್ 2021, 15:09 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಪ್ರಚೋದಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಯವರು ಭಾನುವಾರ ರಾತ್ರಿ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟಿಸುವಾಗ ವ್ಯಕ್ತಿಯೊಬ್ಬರು ಡಿಸಿಪಿಯನ್ನು ಬಹಿರಂಗವಾಗಿಯೇ ಅವಾಚ್ಯ ಪದಗಳಿಂದ ನಿಂದಿಸಿದ ವಿಡಿಯೊ ವೈರಲ್‌ ಆಗಿದೆ.

‘ಗಡುವು ಮುಗಿದರೂ ಪೊಲೀಸರು ಆರೋಪಿಯನ್ನು ಬಂಧಿಸಿಲ್ಲ. ಏನಂತ ತಿಳಿದುಕೊಂಡಿಲೇ ಡಿಸಿಪಿ; ಹಿಂದೂ ಸಮಾಜವನ್ನು ಏನೂ ಬೇಕಾದರೂ ಮಾಡಿದರೆ ನಡೆಯುತ್ತದೆ ಎಂದುಕೊಂಡಿದ್ದೀಯಾ? ಹಿಂದೆ ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದ ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬಂದಿದ್ದರೂ ಆಗಿನ ಕಮಿಷನರ್‌ ಆರ್‌.ದಿಲೀಪ್‌ ವಾಪಸ್‌ ಕಳುಹಿಸಿದ್ದರು. ಆಗ ವಕೀಲರು ಹಾಗೂ ಸಮಾಜ ಒಂದಾಗಿ ಹೋರಾಟ ಮಾಡಿ ದೇಶದ್ರೋಹಿಗಳನ್ನು ಜೈಲಿಗೆ ಹಾಕಿದಂತೆ, ಮತಾಂತರ ಮಾಡುವವರನ್ನೂ ಒಳಗೆ ಹಾಕಿಸ್ತೇವಿ’ ಎನ್ನುವ ಮಾತುಗಳು ವಿಡಿಯೊದಲ್ಲಿವೆ.

‘ಇದುವರೆಗೆ ಆರೋಪಿಯನ್ನು ಬಂಧಿಸಿ ಎನ್ನುವುದಷ್ಟೇ ನಮ್ಮ ಬೇಡಿಕೆಯಾಗಿತ್ತು. ಇನ್ನೂ ವಿಳಂಬವಾದರೆ ಡಿಸಿಪಿಯನ್ನು ಬಂಧಿಸಬೇಕು ಎಂದು ಹೋರಾಟ ಮಾಡಬೇಕಾಗುತ್ತದೆ. ಪೊಲೀಸ್‌ ಇಲಾಖೆಯಲ್ಲಿ ಶೇ 99ರಷ್ಟು ಜನ ಸಿಬ್ಬಂದಿ ಹಿಂದೂಗಳೇ ಇದ್ದು, ಅವರೆಲ್ಲ ಕಾನೂನು ಪಾಲನೆ ಮಾಡುತ್ತಿದ್ದಾರೆ. ಆದರೆ ಮತಾಂತರಿ, ದೇಶದ್ರೋಹಿ ಹಾಗೂ ಸೋನಿಯಾ ಗಾಂಧಿಯ ಚಮಚಾ ಡಿಸಿಪಿ, ಠಾಣೆಗೆ ಸಂಘಟನೆಯ ಕಾರ್ಯಕರ್ತರು ಕರೆದುಕೊಂಡು ಬಂದ ಆರೋಪಿಯನ್ನೇ ವಾಪಸ್‌ ಕಳುಹಿಸಿದ್ದಾನೆ’ ಎಂದು ಏಕವಚನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಿಜೆಪಿ ಮುಖಂಡ ಜಯತೀರ್ಥ ಕಟ್ಟಿ ವಿಡಿಯೊ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿ, ‘ವಿಡಿಯೊದಲ್ಲಿ ಮಾತನಾಡಿದ ವ್ಯಕ್ತಿಯ ಆಕ್ರೋಶದ ಭಾವನೆಗಳು ಅರ್ಥವಾಗುತ್ತವೆ. ಆದರೆ ಆ ವ್ಯಕ್ತಿ ಬಳಸಿದ ಅವಾಚ್ಯ ಪದಗಳಿಗೆ ನಮ್ಮ ಸಹಮತವಿಲ್ಲ’ ಎಂದರು.

ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರ್‌ ಲಾಬೂರಾಮ್‌ ಪ್ರತಿಕ್ರಿಯಿಸಿ, ‘ವಿಡಿಯೊ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಪ್ರಚೋದಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಯವರು ಭಾನುವಾರ ರಾತ್ರಿ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟಿಸುವಾಗ ವ್ಯಕ್ತಿಯೊಬ್ಬರು ಡಿಸಿಪಿಯನ್ನು ಬಹಿರಂಗವಾಗಿಯೇ ಅವಾಚ್ಯ ಪದಗಳಿಂದ ನಿಂದಿಸಿದ ವಿಡಿಯೊ ವೈರಲ್‌ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT