ಬೆಂಗಳೂರು: ಗಿರೀಶ್ ಕಾಸರವಳ್ಳಿ, ಸಾರಾ ಅಬೂಬಕರ್, ಬಿ.ಕೆ.ಸುಮಿತ್ರ ಹಾಗೂ ಚಂದ್ರಕಾಂತ ಪೋಕಳೆ ಅವರು ನಾಡೋಜ ಡಾ.ಬರಗೂರು ಪ್ರತಿಷ್ಠಾನ ನೀಡುವ ‘ಬರಗೂರು ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಾನವು ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ತಲಾ ಒಬ್ಬರಿಗೆ ಪ್ರತಿವರ್ಷವೂ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿರುತ್ತದೆ.

ಸಿನಿಮಾ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಕಾಸರವಳ್ಳಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾರಾ ಅವರಿಗೆ 2020ನೇ ಸಾಲಿನ ಪ್ರಶಸ್ತಿ ದೊರೆತಿದೆ.

ಹಿನ್ನೆಲೆ ಗಾಯಕಿಯಾಗಿ ಹೆಸರು ಗಳಿಸಿರುವ ಹಾಗೂ ಸುಗಮ ಸಂಗೀತ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ಬಿ.ಕೆ.ಸುಮಿತ್ರ ಮತ್ತು ಮರಾಠಿಯಿಂದ ಕನ್ನಡಕ್ಕೆ 40ಕ್ಕೂ ಹೆಚ್ಚು ಕೃತಿಗಳನ್ನು ಅನುವಾದಿಸಿರುವ ಚಂದ್ರಕಾಂತ ಅವರಿಗೆ 2021ನೇ ಸಾಲಿನ ಪ್ರಶಸ್ತಿ ಒಲಿದಿದೆ.

ಇದೇ 30ರಂದು ನಗರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಗಿರೀಶ್ ಕಾಸರವಳ್ಳಿ, ಸಾರಾ ಅಬೂಬಕರ್, ಬಿ.ಕೆ.ಸುಮಿತ್ರ ಹಾಗೂ ಚಂದ್ರಕಾಂತ ಪೋಕಳೆ ಅವರು ನಾಡೋಜ ಡಾ.ಬರಗೂರು ಪ್ರತಿಷ್ಠಾನ ನೀಡುವ ‘ಬರಗೂರು ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.