ಬೆಂಗಳೂರು: ಕೊರೊನಾ ಸೋಂಕಿಗೆ ಒಳಗಾಗುವ ಮಕ್ಕಳಿಗಾಗಿ ಪ್ರತ್ಯೇಕ ಯೋಜನೆಯನ್ನು ಸರ್ಕಾರ ರೂಪಿಸಿಲ್ಲ. ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸುವ ಉದ್ದೇಶದಿಂದ ಹತ್ತು ಜಿಲ್ಲೆಗಳಲ್ಲಿ ಮಾತ್ರ ಪ್ರತ್ಯೇಕ ವಾರ್ಡ್‌ಗಳನ್ನು ತೆರೆಯಲಾಗಿದೆ. ಉಳಿದೆಡೆ, ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲೂ ಮಕ್ಕಳಿಗೆ ಆಮ್ಲಜನಕ ಸಹಿತ ಹಾಸಿಗೆಗಳನ್ನು ಮೀಸಲಿಡಲಾಗಿದೆ.
ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಉತ್ತರಕನ್ನಡ, ಬಳ್ಳಾರಿ, ವಿಜಯಪುರ, ವಿಜಯನಗರ, ಬಾಗಲಕೋಟೆ, ಮೈಸೂರು ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೋವಿಡ್ ವಾರ್ಡ್‌ಗಳನ್ನು ಆರಂಭಿಸಲಾಗಿದೆ.