ಕಲಬುರಗಿ: ‘ನಾವು ಜಾತಿ ಮೇಲೆ ಲೆಕ್ಕಾಚಾರ ಇಟ್ಟು ರಾಜಕೀಯ ಮಾಡುವುದಿಲ್ಲ. ನೀತಿ ಮೇಲೆ ರಾಜಕೀಯ ಮಾಡುತ್ತೇವೆ. ಅಲ್ಪಸಂಖ್ಯಾತರು ಪ್ರಜ್ಞಾವಂತರಿದ್ದಾರೆ. ಯಾರಿಗೆ ಮತ ಹಾಕಿದರೆ ಉತ್ತಮ ಅನ್ನೋದು ಅವರಿಗೆ ಗೊತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸಿಂದಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಪ್ರಚಾರ ನಡೆಸಲು ಬೆಂಗಳೂರಿನಿಂದ ನಗರದ ವಿಮಾನ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿ ಮತ್ತು ಹಾನಗಲ್‌ನಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ಎಂ.ಸಿ. ಮನಗೂಳಿ ಅವರು ಸಾವಿಗೀಡಾಗುವುದಕ್ಕೂ ಮೊದಲು ತಮ್ಮನ್ನು ಭೇಟಿ ಮಾಡಿರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಮನಗೂಳಿ ಅವರು ಇವತ್ತು ಇಲ್ಲ. ಅವರ ಮಗ ಇದ್ದಾರೆ. ಮನಗೂಳಿ ಅವರೇ ತಮ್ಮ ಮಗನ ಜವಾಬ್ದಾರಿ ನಿಮ್ಮದು ಅಂತ ನನಗೆ ಹೇಳಿದ್ದರು. ನಿಮ್ಮ ಮಡಿಲಿಗೆ ನನ್ನ ಮಗನನ್ನು ಹಾಕಿದ್ದೇನೆ ಅಂತ ಹೇಳಿದ್ದರು’ ಎಂದರು.

ಉಚ್ಚಾಟಿತ ಕಾಂಗ್ರೆಸ್ ಮುಖಂಡ ಎಂ.ಎ. ಸಲಿಂ ಹೇಳಿಕೆ ಬಗ್ಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಲಿಲ್ಲ.

‘ನಾವು ಜಾತಿ ಮೇಲೆ ಲೆಕ್ಕಾಚಾರ ಇಟ್ಟು ರಾಜಕೀಯ ಮಾಡುವುದಿಲ್ಲ. ನೀತಿ ಮೇಲೆ ರಾಜಕೀಯ ಮಾಡುತ್ತೇವೆ. ಅಲ್ಪಸಂಖ್ಯಾತರು ಪ್ರಜ್ಞಾವಂತರಿದ್ದಾರೆ. ಯಾರಿಗೆ ಮತ ಹಾಕಿದರೆ ಉತ್ತಮ ಅನ್ನೋದು ಅವರಿಗೆ ಗೊತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.