ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ನವೋದ್ಯಮಗಳ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು. ‘ಬಿಯಾಂಡ್ ಬೆಂಗಳೂರು’ ಯೋಜನೆಯಡಿ ನವೋದ್ಯಮಿಗಳಿಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ನವೋದ್ಯಮ ದಿನಾಚರಣೆ’ ಪ್ರಯುಕ್ತ ಭಾನುವಾರ ಆನ್‌ಲೈನ್ ಮೂಲಕ ಸಂದೇಶ ನೀಡಿದ ಅವರು, ‘ಬೆಂಗಳೂರಿಗೆ ಸೀಮಿತವಾಗಿರುವ ನವೋದ್ಯಮಗಳ ಚಟುವಟಿಕೆಗಳನ್ನು ಇತರ ಜಿಲ್ಲೆಗಳಿಗೆ ವಿಸ್ತರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದರು.

ಸಣ್ಣ ಗ್ಯಾರೇಜಿನಿಂದ ದೊಡ್ಡ ಕೈಗಾರಿಕೆಗಳವರೆಗೆ ಎಲ್ಲ ಹಂತದ ಸಂಶೋಧನೆಗಳಿಗೆ ಸರ್ಕಾರ ಸಹಕಾರ ನೀಡಲಿದೆ. ಇದಕ್ಕಾಗಿ ನೂತನ ‘ಅಭಿವೃದ್ಧಿ ಮತ್ತು ಸಂಶೋಧನಾ ನೀತಿ’ ರೂಪಿಸಿ, ಅನುಷ್ಠಾನಕ್ಕೆ ತರಲಾಗುವುದು. ಶಾಲಾ ಶಿಕ್ಷಣದ ಹಂತದಿಂದಲೇ ಸಂಶೋಧನೆಗೆ ಒತ್ತು ನೀಡಲಾಗುವುದು. ನವೋದ್ಯಮಗಳ ಬೆಳವಣಿಗೆಗೆ ಪೂರಕವಾದ ಚಟುವಟಿಕೆಗಳನ್ನು ಶಾಲೆಗಳಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.

ವಿವಿಧ ಯೋಜನೆಗಳ ಅಡಿಯಲ್ಲಿ ನವೋದ್ಯಮಿಗಳಿಗೆ ನೆರವು ನೀಡಲಾಗುತ್ತಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 482 ನವೋದ್ಯಮಗಳಿಗೆ ₹ 120 ಕೋಟಿ ನೆರವು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ದೇಶದಲ್ಲಿ ಒಟ್ಟು 54,000 ನವೋದ್ಯಮಗಳಿವೆ. ಅವುಗಳಲ್ಲಿ 13,000 ಕರ್ನಾಟಕದಲ್ಲಿವೆ. ಭವಿಷ್ಯದ ದಿನಗಳಲ್ಲಿ ದೇಶದ ಆರ್ಥಿಕತೆಗೆ ನವೋದ್ಯಮಗಳ ಕೊಡುಗೆ ಅಗಾಧವಾಗಿರಲಿದೆ. ಹೆಚ್ಚಿನ ನವೋದ್ಯಮಗಳನ್ನು ಹೊಂದಿರುವ ಕರ್ನಾಟಕ ರಾಜ್ಯವು ದೇಶದ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡಲಿದೆ ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ನವೋದ್ಯಮಗಳ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು. ‘ಬಿಯಾಂಡ್ ಬೆಂಗಳೂರು’ ಯೋಜನೆಯಡಿ ನವೋದ್ಯಮಿಗಳಿಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.