×
ADVERTISEMENT
ಈ ಕ್ಷಣ :
ADVERTISEMENT

ಅತಿಥಿ ಉಪನ್ಯಾಸಕ ಹುದ್ದೆ: 30 ಸಾವಿರಕ್ಕೂ ಹೆಚ್ಚು ಅರ್ಜಿ

Published : 20 ಜನವರಿ 2022, 20:00 IST
ಫಾಲೋ ಮಾಡಿ
Comments

ಬೆಂಗಳೂರು: ‘ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರಿ ಸ್ಪಂದನೆ ವ್ಯಕ್ತವಾಗಿದ್ದು, ಗುರುವಾರದವರೆಗೆ 30 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ’ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ತಿಳಿಸಿದ್ದಾರೆ.

‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನವನ್ನು ಇತ್ತೀಚೆಗೆ ಎರಡೂವರೆ ಪಟ್ಟಿಗಿಂತ ಹೆಚ್ಚು ಏರಿಸಲಾಗಿದೆ. ಇದು ಅರ್ಹ ಅಭ್ಯರ್ಥಿಗಳಲ್ಲಿ ಸಕಾರಾತ್ಮಕ ಪರಿಣಾಮ ಉಂಟು ಮಾಡಿದೆ ಎನ್ನುವುದಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳೇ ಸಾಕ್ಷಿ’ ಎಂದಿದ್ದಾರೆ.

‘ಅರ್ಜಿ ಸಲ್ಲಿಸಲು ಶುಕ್ರವಾರ ಮಧ್ಯರಾತ್ರಿ 12 ಗಂಟೆವರೆಗೂ ಅವಕಾಶವಿದೆ. ಈವರೆಗೂ ಅರ್ಜಿ ಸಲ್ಲಿಸದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ಲ್ಲಿ (https://dec.karnataka/gov.in) ಅರ್ಜಿ ಸಲ್ಲಿಸಬಹುದು’ ಎಂದು ಅವರು ಹೇಳಿದ್ದಾರೆ.

‘ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರಿ ಸ್ಪಂದನೆ ವ್ಯಕ್ತವಾಗಿದ್ದು, ಗುರುವಾರದವರೆಗೆ 30 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ’ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT