×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ: 15 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’

Published : 10 ಅಕ್ಟೋಬರ್ 2021, 1:04 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.10 ಮತ್ತು 11ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲೂ ಇದೇ 14ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅ.11ರಿಂದ ಮಳೆ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.

ಮಳೆ ಎಲ್ಲಿ, ಎಷ್ಟು?: ಕಲಬುರಗಿ ಜಿಲ್ಲೆಯ ಗುಂಡಗುರ್ತಿಯಲ್ಲಿ ಶನಿವಾರ 13 ಸೆಂ.ಮೀ ಗರಿಷ್ಠ ಮಳೆಯಾಗಿದೆ. ರಾಯಚೂರು 6, ಕೊಳ್ಳೇಗಾಲ, ಶಿರಾ 5, ಮಂಗಳೂರು, ಚಿಂಚೋಳಿ, ವಿರಾಜಪೇಟೆ 3, ಕಲಬುರ್ಗಿ, ಮದ್ದೂರು, ಮಾನ್ವಿ, ಮಧುಗಿರಿ, ಮಾಗಡಿ 2, ಸುಳ್ಯ, ಮಡಿಕೇರಿ, ನೆಲಮಂಗಲ, ಶಿಡ್ಲಘಟ್ಟ, ಕುಣಿಗಲ್‌ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಶಿರಾಲಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾ‍ಪಮಾನ ಹಾಗೂ ಬೀದರ್‌ನಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.10 ಮತ್ತು 11ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT