×
ADVERTISEMENT
ಈ ಕ್ಷಣ :
ADVERTISEMENT

ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ: 16 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.16 ಮತ್ತು 17ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಎರಡೂ ದಿನ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಯಾವುದೇ ಸೂಚನೆಗಳಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.

ಮಳೆ ಎಲ್ಲಿ, ಎಷ್ಟು?: ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಶುಕ್ರವಾರ 5 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸಿದ್ದಾಪುರ, ಬೆಂಗಳೂರು ನಗರ 4, ಮೈಸೂರು 3, ಹರಪನಹಳ್ಳಿ, ಭದ್ರಾವತಿ 2, ಪುತ್ತೂರು, ಚಿಕ್ಕಮಗಳೂರು, ಮದ್ದೂರು, ಭಾಗಮಂಡಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.16 ಮತ್ತು 17ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT