ರಾಜ್ಯ ಸರ್ಕಾರ 27 ಐಎಎಸ್ ಮತ್ತು 7 ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಬಿ.ಎಚ್.ಅನಿಲ್ ಕುಮಾರ್ ಅವರನ್ನು ಮೂಲಭೂತ ಸೌಕರ್ಯ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಮತ್ತೊಬ್ಬ ಹೆಚ್ಚುವರಿ ಮುಖ್ಯ
ಕಾರ್ಯದರ್ಶಿ ಕಪಿಲ್ ಮೋಹನ್ ಅವರನ್ನು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಹಾಗೂ ಕಾನೂನು ಮಾಪನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಇತರ ಅಧಿಕಾರಿಗಳನ್ನು ಅವರ ಮುಂದಿನ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.