ಜಲ ಸಂಪನ್ಮೂಲ ಮತ್ತು ಲೋಕೋಪಯೋಗಿ ಇಲಾಖೆಗಳಲ್ಲಿ ಬೃಹತ್ ಕಾಮಗಾರಿಗಳ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಮತ್ತು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬದ ಆಪ್ತರಾಗಿದ್ದ ಬಿಎಂಟಿಸಿ ಚಾಲಕ ಆಯನೂರು ಉಮೇಶ್ ಮನೆ, ಕಚೇರಿಗಳಲ್ಲಿ ನಡೆಸಿದ ಶೋಧದಲ್ಲಿ ₹ 750 ಕೋಟಿಯಷ್ಟು ಅಘೋಷಿತ ಆದಾಯ ಪತ್ತೆಯಾಗಿದೆ ಎಂದು ಆದಾಯ ತೆರಿಗೆ (ಐ.ಟಿ) ಇಲಾಖೆ ತಿಳಿಸಿದೆ.