ಬೆಂಗಳೂರು: ರಾಜ್ಯಕ್ಕೆ ಈಗ ಪೂರೈಕೆಯಾಗುತ್ತಿರುವ 10 ರೇಕ್ ಕಲ್ಲಿದ್ದಿಲಿನ ಪ್ರಮಾಣವನ್ನು 14 ರೇಕ್‌ಗಳಿಗೆ ಹೆಚ್ಚಿಸಲು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನವದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಶನಿವಾರ ವಾಪಸ್ ಆದ ಬೊಮ್ಮಾಯಿ ಸುದ್ದಿಗಾರರ ಜತೆ ಮಾತನಾಡಿದರು.

‘ನಾನಾ ಕಾರಣಗಳಿಂದ ಕಲ್ಲಿದ್ದಲು ಕೊರತೆ ಇಡೀ ಜಗತ್ತನ್ನು ಬಾಧಿಸುತ್ತಿದೆ. ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಕಲ್ಲಿದ್ದಲು ಸಂಗ್ರಹ ಕಡಿಮೆಯಾಗಬಾರದು ಎಂಬ ಕಾರಣಕ್ಕೆ ಜೋಶಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಕರ್ನಾಟಕಕ್ಕೆ ಪೂರೈಸುವ ಪ್ರಮಾಣವನ್ನು ಹೆಚ್ಚಿಸುವಂತೆ ಸಚಿವರು, ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದರು.

‘ಕೇಂದ್ರ ಆರೋಗ್ಯ ಹಾಗೂ ರಸಗೊಬ್ಬರ ಸಚಿವ ಮನಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಡಿಎಪಿ ಮತ್ತು ಎಂಒಪಿ ರಸಗೊಬ್ಬರ ಸರಬರಾಜು ಮಾಡಲು ಮನವಿ ಮಾಡಿದ್ದೇನೆ. ಇನ್ನು ಒಂದು ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದರು.

‘ಕರ್ನಾಟಕದಲ್ಲಿ ಅರ್ಹತೆ ಪಡೆದ ಜನರ ಪೈಕಿ ಶೇ 81ರಷ್ಟು ಜನರಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಡಿಸೆಂಬರ್ ಅಂತ್ಯದೊಳಗೆ ಈ ಪ್ರಮಾಣವನ್ನು ಶೇ 90ಕ್ಕೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ’ ಎಂದೂ ಬೊಮ್ಮಾಯಿ ಹೇಳಿದರು.

ರಾಜ್ಯಕ್ಕೆ ಈಗ ಪೂರೈಕೆಯಾಗುತ್ತಿರುವ 10 ರೇಕ್ ಕಲ್ಲಿದ್ದಿಲಿನ ಪ್ರಮಾಣವನ್ನು 14 ರೇಕ್‌ಗಳಿಗೆ ಹೆಚ್ಚಿಸಲು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.