ಬೆಂಗಳೂರು: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಮೂಲಕ ನ್ಯಾಯ ಕೊಡಿಸಬೇಕೆಂದು ರಾಜ್ಯಸಭೆ ಜೆಡಿಎಸ್ ಸದಸ್ಯ ಎಚ್.ಡಿ ದೇವೇಗೌಡ ಅವರ ಪತ್ರ ಆಧರಿಸಿ ಕ್ರಮ ತೆಗೆದುಕೊಳ್ಳಲು ಕಡತ ಮಂಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿಗೆ (ಸಿಎಸ್) ಸೂಚಿಸಿದ್ದಾರೆ.
ವ್ಯಾಪಕ ಭ್ರಷ್ಟಾಚಾರ ನಡೆದಿದೆಯೆಂಬ ಕಾರಣಕ್ಕೆ ಈ ಸಾಲಿನ ನೇಮಕಾತಿಯನ್ನು ರದ್ದುಗೊಳಿಸಿ 2018ರ ಮಾರ್ಚ್ 9ರಂದು ಹೈಕೋರ್ಟ್ ತೀರ್ಪು ನೀಡಿತ್ತು. ಅದೇ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಆ ಬಳಿಕ, ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನೂ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.