×
ADVERTISEMENT
ಈ ಕ್ಷಣ :
ADVERTISEMENT

ಮೇಕೆದಾಟು ಪಾದಯಾತ್ರೆ: ವರದಿ ನೀಡಲು ಕಾಂಗ್ರೆಸ್ ಕಾನೂನು ಘಟಕದಿಂದ ಸಮಿತಿ ರಚನೆ

Published : 16 ಜನವರಿ 2022, 18:58 IST
ಫಾಲೋ ಮಾಡಿ
Comments

ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಲ್ಲ ಪ್ರಕರಣಗಳ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿ, ಪರಿಶೀಲಿಸಿ ಮುಂದಿನ ಕಾನೂನು‌ ಕ್ರಮ ಮತ್ತು ಹೋರಾಟದ ಬಗ್ಗೆ ಮೂರು ದಿನಗಳ ಒಳಗೆ ವರದಿ ನೀಡಲು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರು ಐವರು ಸದಸ್ಯರ ಉನ್ನತ ಸಮಿತಿಯನ್ನು ರಚಿಸಿದ್ದಾರೆ. 

ಕೆಪಿಸಿಸಿ ಕಾನೂನು ಘಟಕದ ಮಾಜಿ ಅಧ್ಯಕ್ಷ ಧನಂಜಯ, ಹೈಕೋರ್ಟ್ ವಕೀಲರಾದ ಎಚ್.ಸಿ. ಚಂದ್ರಮೌಳಿ, ಎ.ಜಿ. ಶಿವಣ್ಣ, ಕೆ. ದಿವಾಕರ ಮತ್ತು ಕರ್ನಾಟಕ ವಕೀಲರ ಪರಿಷತ್ ಸದಸ್ಯ ಮುನಿಯಪ್ಪ ಈ ಸಮಿತಿಯ ಸದಸ್ಯರು. 

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಈ ಸಮಿತಿ ರಚಿಸಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾಗಿ, ಸಂಬಂಧಪಟ್ಟ ಎಲ್ಲ  ಅಧಿಕಾರಿಗಳನ್ನು ಭೇಟಿ ಮಾಡಿ ವರದಿ ತಯಾರಿಸಿ ನೀಡಬೇಕು ಎಂದು ಸಮಿತಿಗೆ ಪೊನ್ನಣ್ಣ ಅವರು ಸೂಚಿಸಿದ್ದಾರೆ.

ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ದಾಖಲಾಗಿರುವ ಎಲ್ಲ ಪ್ರಕರಣಗಳ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿ, ಪರಿಶೀಲಿಸಿ ಮುಂದಿನ ಕಾನೂನು‌ ಕ್ರಮ ಮತ್ತು ಹೋರಾಟದ ಬಗ್ಗೆ ಮೂರು ದಿನಗಳ ಒಳಗೆ ವರದಿ ನೀಡಲು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಅವರು ಐವರು ಸದಸ್ಯರ ಉನ್ನತ ಸಮಿತಿಯನ್ನು ರಚಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT