×
ADVERTISEMENT
ಈ ಕ್ಷಣ :
ADVERTISEMENT

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಸಚಿವ ಅಶ್ವತ್ಥನಾರಾಯಣ ಹೇಳಿಕೆ

ಫಾಲೋ ಮಾಡಿ
Comments

ಬೆಂಗಳೂರು: ‘ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ಸಾಧ್ಯ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಅತಿಥಿ ಉಪನ್ಯಾಸಕರ ಸಂಘಟನೆಗಳ ಜೊತೆ ಚರ್ಚಿಸಿದ ಬಳಿಕವೇ ಗೌರವಧನ ಘೋಷಿಸಲಾಗಿದೆ. ಈಗ ಕೆಲವು ಸಂಘಟನೆಗಳು ಈ ವಿಚಾರಕ್ಕೆ ಅನಗತ್ಯವಾಗಿ ರಾಜಕೀಯ ಬಣ್ಣ ಬಳಿಯುತ್ತಿರುವುದು ಸರಿಯಲ್ಲ’ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಶುಕ್ರವಾರ (ಜ. 14) ಆದೇಶ ಹೊರಡಿಸಿದೆ.

ಗೌರವಧನ ಹೆಚ್ಚಿಸಿದ ಬಳಿಕವೂ ಮುಷ್ಕರದಿಂದ ಹಿಂದೆಸರಿಯುವುದಿಲ್ಲವೆಂದು ಅತಿಥಿ ಉಪನ್ಯಾಸಕರು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದಾರೆ. ಈ ಪೈಕಿ, 4,500 ಮಂದಿ ಮಾತ್ರ ಯುಜಿಸಿ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ಹೊಂದಿದ್ದಾರೆ’ ಎಂದಿದ್ದಾರೆ.

ಸರ್ಕಾರ ಅವರ ವೇತನವನ್ನು ಗೌರವಾರ್ಹವಾಗಿ ಹೆಚ್ಚಿಸಬೇಕೆಂದು ಮುಷ್ಕರನಿರತ ಸಂಘಟನೆಗಳೇ ಹೇಳಿದ್ದವು. ಅದಕ್ಕೆ ಸ್ಪಂದಿಸಿ, ದುಪ್ಪಟ್ಟಿಗಿಂತಲೂ ಹೆಚ್ಚು ವೇತನ ಏರಿಸಲಾಗಿದೆ. ಇಷ್ಟಾದ ಮೇಲೆಯೂ ಅತಿಥಿ ಉಪನ್ಯಾಸಕರು ಹಠ ಹಿಡಿದಿರುವುದು ಬೇಸರದ ಸಂಗತಿ’ ಎಂದರು.

‘ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ಸಾಧ್ಯ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT