×
ADVERTISEMENT
ಈ ಕ್ಷಣ :
ADVERTISEMENT

ಚಿತ್ರಗಳಲ್ಲಿ ನೋಡಿ: ಮಹಾ ಮಳೆಗೆ ಹಂಪಿಯ ಇನ್ನಷ್ಟು ಸ್ಮಾರಕಗಳು ಮುಳುಗಡೆ

Published : 14 ಜುಲೈ 2022, 14:38 IST
ಫಾಲೋ ಮಾಡಿ
Comments

ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯದಿಂದ ನದಿಗೆ ಗುರುವಾರ 1.41 ಲಕ್ಷ ಕ್ಯುಸೆಕ್ ನೀರು ಹರಿಸಿರುವುದರಿಂದ ಹಂಪಿ ರಾಮ–ಲಕ್ಷ್ಮಣ ದೇವಸ್ಥಾನ, ಅದಕ್ಕೆ ಹೊಂದಿಕೊಂಡಿರುವ ಸಾಲು ಮಂಟಪಗಳು, ಕರ್ಮ ಮಂಟಪ ಮುಳುಗಿದೆ.

ಹಂಪಿಯ ಸ್ನಾನಘಟ್ಟ, ಚಕ್ರತೀರ್ಥ, ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ಕಂಪ್ಲಿ-ಗಂಗಾವತಿ ಸೇತುವೆ ಬುಧವಾರವೇ ಮುಳುಗಡೆಯಾಗಿದ್ದವು.

ನದಿಯಲ್ಲಿ ಸತತ ನೀರಿನ ಹರಿವು ಹೆಚ್ಚಾಗುತ್ತಿದ್ದು, ನದಿ ತೀರದಲ್ಲಿ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ. ಇನ್ನಷ್ಟೇ ಹಾನಿಯ ಪ್ರಮಾಣ ಗೊತ್ತಾಗಬೇಕಿದೆ. ಒಟ್ಟು 105.788 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 97.753 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. 1,04,503 ಕ್ಯುಸೆಕ್ ಒಳಹರಿವು ದಾಖಲಾಗಿದೆ.

ಚಿತ್ರಗಳು: ರಾಚಯ್ಯ ಎಸ್‌. ಸ್ಥಾವರಿಮಠ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT