×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ಟವೆಲ್ ಹಾಕಿಲ್ಲ: ಆರ್‌. ಅಶೋಕ

ಫಾಲೋ ಮಾಡಿ
Comments

ಬೆಂಗಳೂರು: ‘ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್‌ ಹಾಕಿಲ್ಲ. ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್‌ ತಮಗೆ ಬಿಟ್ಟು ಕೊಡುವಂತೆ ಕೇಳಿದರು. ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆ’ ಎಂದು ಆರ್‌. ಅಶೋಕ ಹೇಳಿದರು.

‘ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಅವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ. ಸೋಮಣ್ಣ ಸರಿಯಾಗಿ ಹೇಳಿದ್ದಾರೆ. ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ. ಅವರು ಸಭೆ ಕರೆದ ಹಿಂದಿನ ದಿನ ಅರ್ಧ ಗಂಟೆ ಮಾತನಾಡಿದ್ದೆವು. ಪೂರ್ವನಿಗದಿತ ಕಾರ್ಯಕ್ರಮ ಅಥವಾ ಪ್ರವಾಸದಲ್ಲಿದ್ದರೆ ಸಭೆಗೆ ಹೋಗಲು ಆಗುವುದಿಲ್ಲ. ಉಳಿದಂತೆ ಶಾಸಕರೇ ಸಭೆ ಕರೆದರೂ ನಾನು ಹೋಗುತ್ತೇನೆ’ ಎಂದು ಹೇಳಿದರು.

‘ನನ್ನ ಇಲಾಖೆಯನ್ನು ಬಿಟ್ಟು ಬೇರೆ ಇಲಾಖೆಗಳ ಕೆಲಸಕ್ಕೆ ನಾನು ತಲೆ ಹಾಕುವುದಿಲ್ಲ. ಬೆಂಗಳೂರಿನಲ್ಲಿ ರಸ್ತೆಗಳ ಗುಂಡಿ ಮುಚ್ಚಿಸಲು ಹೇಳಿದ್ದಾರೆ. ಅದನ್ನಷ್ಟೇ ಮಾಡಿದ್ದೇನೆ’ ಎಂದರು.

ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್‌ ಹಾಕಿಲ್ಲ. ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್‌ ತಮಗೆ ಬಿಟ್ಟು ಕೊಡುವಂತೆ ಕೇಳಿದರು. ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT