ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಲ್ಲಿ ಕಂದಾಯ ಇಲಾಖೆಯ ಸೇವೆಗಳನ್ನು ಒದಗಿಸುವುದರಲ್ಲಿನ ಕಾರ್ಯಕ್ಷಮತೆಯಲ್ಲಿ ತುಮಕೂರು ಜಿಲ್ಲೆಗೆ ರಾಜ್ಯದಲ್ಲೇ ಮೊದಲ ಸ್ಥಾನ ದೊರಕಿದೆ.

ಬೆಂಗಳೂರು ಗ್ರಾಮಾಂತರ ಎರಡನೇ ರ್ಯಾಂಕ್ ಪಡೆದಿದ್ದರೆ, ಶಿವಮೊಗ್ಗ ಜಿಲ್ಲೆ ಮೂರನೇ ರ್ಯಾಂಕ್ ಪಡೆದಿದೆ. ಹಾವೇರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಕಂದಾಯ ಇಲಾಖೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸುವುದರಲ್ಲಿ ಆಗಿರುವ ಪ್ರಗತಿಯನ್ನು ಆಧರಿಸಿ ರ್ಯಾಂಕಿಂಗ್ ನೀಡಲಾಗಿದೆ.

ಮ್ಯುಟೇಷನ್, ಭೂ ಪರಿವರ್ತನೆ, ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿನ ಪ್ರಕರಣಗಳ ವಿಲೇವಾರಿ, ಭೂಮಾಪನ ಅರ್ಜಿಗಳ ವಿಲೇವಾರಿ, ಪಹಣಿ ದೋಷ ತಿದ್ದುಪಡಿ, ಪಹಣಿಯಲ್ಲಿ ಬೆಳೆ ಕಾಲಂ ಸೇರಿದಂತೆ ವಿವಿಧ ಮಾಹಿತಿಗಳ ದಾಖಲಿಸುವ ಪ್ರಕ್ರಿಯೆಯಲ್ಲಿನ ಪ್ರಗತಿಯನ್ನು ಆಧರಿಸಿ ಈ ರ್ಯಾಂಕಿಂಗ್ ನೀಡಲಾಗಿದೆ ಎಂದು ಕಂದಾಯ ಇಲಾಖೆ ಭೂ ದಾಖಲೆಗಳ ಆಯುಕ್ತ ಮನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಎಂಟು ಮಾನದಂಡಗಳ ಆಧಾರದಲ್ಲಿ ಮೌಲ್ಯಮಾಪನ ನಡೆಸಲಾಗಿದೆ. ಪ್ರತಿ ವಿಷಯದಲ್ಲೂ ಜಿಲ್ಲಾವಾರು ಅಂಕ ನೀಡಲಾಗಿದೆ. ಒಟ್ಟು ಸರಾಸರಿ ಅಂಕದ ಆಧಾರದಲ್ಲಿ ರ್ಯಾಂಕಿಂಗ್ ನೀಡಲಾಗಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಕಂದಾಯ ಇಲಾಖೆಯ ಸೇವೆಗಳನ್ನು ಒದಗಿಸುವುದರಲ್ಲಿನ ಕಾರ್ಯಕ್ಷಮತೆಯಲ್ಲಿ ತುಮಕೂರು ಜಿಲ್ಲೆಗೆ ರಾಜ್ಯದಲ್ಲೇ ಮೊದಲ ಸ್ಥಾನ ದೊರಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.