×
ADVERTISEMENT
ಈ ಕ್ಷಣ :
ADVERTISEMENT

ಯಡಿಯೂರಪ್ಪ- ಸಿದ್ದರಾಮಯ್ಯ ಭೇಟಿಯೇ ಐಟಿ ದಾಳಿಗೆ ಕಾರಣ: ಕುಮಾರಸ್ವಾಮಿ

ಫಾಲೋ ಮಾಡಿ
Comments

ಮೈಸೂರು: ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಆಪ್ತರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಲು ಯಡಿಯೂರಪ್ಪ- ಸಿದ್ದರಾಮಯ್ಯ ಭೇಟಿಯೇ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸಿದ್ದರಾಮಯ್ಯ ಅಧಿಕಾರಕ್ಕಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವಿಷಯ ಕೇಂದ್ರಕ್ಕೆ ತಿಳಿದು ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಈ ದಾಳಿ ನಡೆಸಲಾಗಿದೆ. ದಾಳಿಯ ಹಿಂದೆ ರಾಜಕೀಯದ ಉದ್ದೇಶ ಇರುವುದು ಸ್ಪಷ್ಟ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ಹೇಳಿದರು.

ವಿರೋಧ ಪಕ್ಷದ ನಾಯಕ ಸ್ಥಾನಕ್ಕಾಗಿ ಸರ್ಕಾರವನ್ನೇ ತೆಗೆದ ಮಹಾನ್ ನಾಯಕ ಸಿದ್ದರಾಮಯ್ಯ. ಯಡಿಯೂರಪ್ಪ ಸರ್ಕಾರ ಬರಲು ಅವರೆಷ್ಟು ಕಾರಣ, ಅಧಿಕಾರಕ್ಕಾಗಿ ಎಷ್ಟು ಕುತಂತ್ರ ನಡೆಸುತ್ತಾರೆ ಎಂಬುದು ಗೊತ್ತಿದೆ. ಅಧಿಕಾರಕ್ಕಾಗಿ ಅವರು ಏನು ಬೇಕಾದರೂ ಮಾಡಬಲ್ಲರು ಎಂದು ಹರಿಹಾಯ್ದರು.

‘ಸಿಂಧಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಯಾವಾಗಲೂ 3ನೇ ಸ್ಥಾನದಲ್ಲಿದೆ. ಅಲ್ಲಿ ಬಿಜೆಪಿ, ಜೆಡಿಎಸ್ ನಡುವೆ ನೇರ ಹಣಾಹಣಿ ಇದೆ. ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸಲೆಂದೇ ಯೋಚಿಸಿ ಅಭ್ಯರ್ಥಿ ಹಾಕಿದ್ದೇವೆ. ನಮಗೆ ಸರಿ ಎನ್ನಿಸುವವರಿಗೆ ಟಿಕೆಟ್ ಕೊಡುತ್ತೇವೆ. ಸಿದ್ದರಾಮಯ್ಯ ಯಾವ ದೊಣ್ಣೆನಾಯಕ ಎಂದು ಅವರನ್ನು ಕೇಳಿ ಅಭ್ಯರ್ಥಿ ಹಾಕಬೇಕು’ ಎಂದು ಪ್ರಶ್ನಿಸಿದರು.

‘ಗ್ರಾಮವೊಂದರಲ್ಲಿ ಜೆಡಿಎಸ್ ಅಭ್ಯರ್ಥಿಗೆ ಊರಿನವರೇ ₹ 50 ಸಾವಿರ ದೇಣಿಗೆ ನೀಡಿ ಹರಸಿದ್ದಾರೆ. ಕಾಂಗ್ರೆಸ್‌ಗೆ ಅಭ್ಯರ್ಥಿ ಇಲ್ಲದೇ ಇರುವುದರಿಂದ ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿದ್ದಾರೆ’ ಎಂದರು.

‘ನನ್ನ ವಿರುದ್ಧ ಮಾತನಾಡದೇ ಹೋದರೆ ಸಿದ್ದರಾಮಯ್ಯ ಅವರಿಗೆ ನಿದ್ದೆ ಬರುವುದಿಲ್ಲ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಒಬ್ಬರೇ ನಿಖಿಲ್‌ನನ್ನು ಸೋಲಿಸಿದರು ಎಂದು ಹೇಳಿಲ್ಲ. ಕಾಂಗ್ರೆಸ್, ಬಿಜೆಪಿ, ರೈತಸಂಘ ಎಲ್ಲರೂ ಸೇರಿ ಚಕ್ರವ್ಯೂಹ ರಚಿಸಿ ಸೋಲಿಸಿದ್ದಾರೆ’ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅಧಿಕಾರಕ್ಕಾಗಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವಿಷಯ ಕೇಂದ್ರಕ್ಕೆ ತಿಳಿದು ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಈ ದಾಳಿ ನಡೆಸಲಾಗಿದೆ. ದಾಳಿಯ ಹಿಂದೆ ರಾಜಕೀಯದ ಉದ್ದೇಶ ಇರುವುದು ಸ್ಪಷ್ಟ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗಾರರಿಗೆ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT