ಬೆಂಗಳೂರು: ‘ತಮ್ಮ ಪಕ್ಷದಲ್ಲಿದ್ದವರು ಕಾಂಗ್ರೆಸ್‌ಗೆ ಹೋಗಿದ್ದಾರಲ್ಲ ಎಂಬ ನೋವು ಕುಮಾರಣ್ಣ ಅವರಿಗಿದೆ. ಆ ನೋವಿನಿಂದ ಮಾತನಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಕುಮಾರಸ್ವಾಮಿ ಮಾಡಿರುವ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ’ರಾಜಕಾರಣ ನಿಂತ ನೀರಲ್ಲ ಎಂದು ಕುಮಾರಣ್ಣ ಅವರೇ ಹೇಳಿದ್ದಾರೆ. ಕೆಲವರು ಬಿಜೆಪಿಗೆ ಹೋಗಲು ಸಿದ್ಧರಿರುತ್ತಾರೆ. 17 ಜನ ಸಂಸದರು ಗೆದ್ದು, ದೇವೇಗೌಡರು ದೇಶದ ಪ್ರಧಾನಿ ಆದಾಗ, ನಾವು ಅವರನ್ನು ಹೈಜಾಕ್ ಮಾಡಿ ಕರೆದುಕೊಂಡು ಬಂದಿದ್ದೆವಾ? ಒಂದಲ್ಲ ಒಂದು ಕಾರಣದಿಂದ ಬರುವವರು ಬರುತ್ತಾರೆ. ಈ ಹಿಂದೆ ಅನೇಕ ನಾಯಕರು ಕೂಡ ಅವರ ಜತೆ ರಾಜಕೀಯ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್‌ಗೆ ಬಂದಿದ್ದರು’ ಎಂದರು.

‘ಎಂ.ಸಿ. ಮನಗೂಳಿ ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್‌ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ’ ಎಂದರು.

‘ತಮ್ಮ ಪಕ್ಷದಲ್ಲಿದ್ದವರು ಕಾಂಗ್ರೆಸ್‌ಗೆ ಹೋಗಿದ್ದಾರಲ್ಲ ಎಂಬ ನೋವು ಕುಮಾರಣ್ಣ ಅವರಿಗಿದೆ. ಆ ನೋವಿನಿಂದ ಮಾತನಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.