×
ADVERTISEMENT
ಈ ಕ್ಷಣ :
ADVERTISEMENT

ನೀವು ಹಿಂದೂ ವಿರೋಧಿಗಳ ಐಕಾನ್ ಆಗಿದ್ದೀರಿ: ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು

Published : 14 ಅಕ್ಟೋಬರ್ 2021, 15:14 IST
ಫಾಲೋ ಮಾಡಿ
Comments

ಬೆಂಗಳೂರು: ಮತೀಯ ಗೂಂಡಾಗಿರಿ ಕುರಿತು 'ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕ‌ೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ರಾಜೀನಾಮೆಗೆ ಪಟ್ಟು ಹಿಡಿದಿದ್ದರು. 

ಇದಕ್ಕೆ ತಿರುಗೇಟು ನೀಡಿರುವ ಬೊಮ್ಮಾಯಿ, ಆಡಳಿತ ಪಾಠ ನಿಮ್ಮಿಂದ ಕಲಿಯಬೇಕಿಲ್ಲ ಎಂದು ಹೇಳಿದ್ದಾರೆ. 

'ನೀವು ಸಿಎಂ ಆಗಿದ್ದಾಗ ಟಿಪ್ಪು ಸುಲ್ತಾನರ ಆಳ್ವಿಕೆಯಲ್ಲಿ ಮಾಡಿದ್ದಂತೆ ಹಿಂದೂ ಕಾರ್ಯಕರ್ತರನ್ನು ಸಾಯಿಸುವ ಮೂಲಕ ಹಿಂದೂ ವಿರೋಧಿಗಳ 'ಐಕಾನ್' ಆಗಿದ್ದೀರಿ. ಪೊಲೀಸ್ ಅಥವಾ ಆಡಳಿತ ಪಾಠವನ್ನು ನಾನು ನಿಮ್ಮಿಂದ ಕಲಿಯಬೇಕಿಲ್ಲ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ನಮ್ಮಲ್ಲಿ ಸಮರ್ಥ ಪೊಲೀಸ್ ಪಡೆ ಇದೆ' ಎಂದು ಹೇಳಿದ್ದಾರೆ. 

'ನಿಮ್ಮ ಆಡಳಿತದಲ್ಲಿ 'ಜಂಗಲ್ ರಾಜ್' ನಿರ್ಮಾಣವಾಗಿತ್ತು. ಹಿಂದೂಗಳ ಹತ್ಯೆ ವೇಳೆ ನೀವು ಕುರುಡ, ಕಿವುಡ ಮತ್ತು ಮೂಕರಾಗಿದ್ದೀರಿ.  ನನ್ನ ಆಡಳಿತದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ನಿಮ್ಮ ಜಂಗಲ್ ರಾಜ್‌ನಲ್ಲಿ ಹಿಂದೂಗಳನ್ನು ಕೊಲ್ಲಲಾಯಿತು ಮತ್ತು ಅನೇಕ ಗಲಭೆಗಳು ನಡೆದವು' ಎಂದು ಆರೋಪಿಸಿದ್ದಾರೆ.   

'ನಮ್ಮ ಸಮಾಜದಲ್ಲಿ ಪ್ರತಿಯೊಂದು ಕ್ರಿಯೆಗೂ ತಕ್ಕ ಪ್ರತಿಕ್ರಿಯೆ ಇರುತ್ತದೆ ಮತ್ತು ಕಾನೂನು ತನ್ನದೇ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ನಾನು ಹೇಳಿದ್ದೆ. ಆದರೆ ನಿಮ್ಮ ಆಳ್ವಿಕೆಯಲ್ಲಿ ಎಲ್ಲ ಕಡೆ ಹಿಂದೂಗಳನ್ನು ಕೊಲ್ಲಲಾಗಿತ್ತು. ನೀವು ಕನ್ನಡಿಯನ್ನು ನಿಮ್ಮ ಕಡೆಗೆ ತಿರುಗಿಸಿಕೊಳ್ಳಬೇಕಿದೆ. ನಿಮ್ಮ ಕೈಗಳಲ್ಲಿ ರಕ್ತ ಅಂಟಿಸಿಕೊಂಡು ಹೇಗೆ ಮಲಗುತ್ತಿರೋ ಎಂದು ದೇವರಿಗೇ ಗೊತ್ತು' ಎಂದು ತಿರುಗೇಟು ನೀಡಿದ್ದಾರೆ. 

ಮತೀಯ ಗೂಂಡಾಗಿರಿ ಕುರಿತು 'ಕ್ರಿಯೆ-ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕ‌ೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ರಾಜೀನಾಮೆಗೆ ಪಟ್ಟು ಹಿಡಿದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT