×
ADVERTISEMENT
ಈ ಕ್ಷಣ :
ADVERTISEMENT

ಅಫ್ಗನ್‌: ಮಸೀದಿಯಲ್ಲಿ ಆತ್ಮಾಹುತಿ ದಾಳಿ 37 ಮಂದಿ ಸಾವು

ಫಾಲೋ ಮಾಡಿ
Comments

ಕಂದಹಾರ್: ‘ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್‌ನ ಇಮಾಮ್ ಬರ್ಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದು, 74ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ’ ಎಂದು ತಾಲಿಬಾನ್ ಅಧಿಕಾರಿಗಳು ಹೇಳಿದ್ದಾರೆ.

ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಸತತ ಎರಡನೇ ಶುಕ್ರವಾರವೂ ನಡೆದ ದಾಳಿ ಇದಾಗಿದೆ. ‘ಮಸೀದಿಯೊಳಗೆ ಆತ್ಮಹತ್ಯಾ ಬಾಂಬರ್ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಸ್ಥಳೀಯ ತಾಲಿಬಾನ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಫೋಟದ ಹೊಣೆಯನ್ನು ಇದುವರೆಗೆ ಯಾವ ಉಗ್ರ ಸಂಘಟನೆಯು ಒಪ್ಪಿಕೊಂಡಿಲ್ಲ. ಅ. 8ರಂದು ಕುಂಡುಜ್‌ ಪ್ರಾಂತ್ಯದ ಶಿಯಾ ಮಸೀದಿಯಲ್ಲಿ ಇಸ್ಲಾಮಿಕ್ ಸ್ಟೇಟ್-ಖೊರಾಸನ್ (ಐಎಸ್-ಕೆ) ನಡೆಸಿದ ಸ್ಫೋಟದ ಮಾದರಿಯಲ್ಲೇ ಈ ದಾಳಿಯನ್ನು ನಡೆಸಲಾಗಿದೆ ಎನ್ನಲಾಗಿದೆ.

‘ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್‌ನ ಇಮಾಮ್ ಬರ್ಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದು, 74ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ’ ಎಂದು ತಾಲಿಬಾನ್ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT