ವಾಷಿಂಗ್ಟನ್: ಭಾರತ, ಕೋವಿಡ್ ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ಎದುರಿಸುವ ಜೊತೆಗೆ, ಜಾಗತಿಕ ಮಟ್ಟದಲ್ಲಿ ಈ ಸಾಂಕ್ರಾಮಿಕದ ವಿರುದ್ಧ ನಡೆದ ಹೋರಾಟದಲ್ಲೂ ಪ್ರಮುಖ ಪಾತ್ರವಹಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದರು.

ಇಲ್ಲಿನ ವಿಶ್ವ ಬ್ಯಾಂಕ್ ಅಭಿವೃದ್ಧಿ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾಡಿದ ಸಚಿವರು, ಭಾರತದ ಆರ್ಥಿಕತೆಯು ತ್ವರಿತಗತಿಯಲ್ಲಿ ಚೇತರಿಕೆ ಕಂಡಿರುವುದನ್ನು ಉಲ್ಲೇಖಿಸುತ್ತಾ, ಮೋದಿ ಸರ್ಕಾರ, ಆರ್ಥಿಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ಈ ಕೋವಿಡ್ ಬಿಕ್ಕಟ್ಟನ್ನೇ ಒಂದು ಅವಕಾಶವಾಗಿ ಬಳಸಿಕೊಂಡು ರಚನಾತ್ಮಕ ಸುಧಾರಣೆಗಳನ್ನು ಕೈಗೊಂಡಿದೆ‘ ಎಂದು ಹೇಳಿದರು.

ಓದಿ: ಉಗ್ರರಿಗೆ ಆರ್ಥಿಕ ನೆರವು ವಿರುದ್ಧ ಹೋರಾಟಕ್ಕೆ ಸಹಕಾರ: ಅಮೆರಿಕ - ಭಾರತ ಹೇಳಿಕೆ

‘ಸರ್ಕಾರ ಕೈಗೊಂಡ ಕ್ರಮಗಳು ಭಾರತದ ನಿರಂತರ ಆರ್ಥಿಕ ಬೆಳವಣಿಗೆಗೆ ಬಲವಾದ ಅಡಿಪಾಯವನ್ನು ಹಾಕಿವೆ‘ ಎಂದು ಅವರು ಹೇಳಿದರು.

ಅಂತರರಾಷ್ಟ್ರೀಯ ಹಣಕಾಸು ನಿಧಿಯ(ಐಎಂಎಫ್) ವಿಶ್ವ ಆರ್ಥಿಕ ದೃಷ್ಟಿಕೋನದ ಪ್ರಕಾರ, 2021ರಲ್ಲಿ ತ್ವರಿತಗತಿಯಲ್ಲಿ ಆರ್ಥಿಕ ಚೇತರಿಕೆ ಕಂಡ ಪ್ರಮುಖ ರಾಷ್ಟ ಭಾರತ ಎಂದು ಹೇಳಲಾಗಿದೆ. ಈ ಪ್ರಕಾರ, ದೇಶದಲ್ಲಿ 2021ರಲ್ಲಿ ಶೇ 9.5 ಮತ್ತು 2022ರಲ್ಲಿ ಶೇ 8.5ರಷ್ಟು ಆರ್ಥಿಕ ಪ್ರಗತಿಯಾಗುವುದಾಗಿ ಅಂದಾಜಿಸಲಾಗಿದೆ.

ಸಾಂಕ್ರಾಮಿಕ ರೋಗದ ಹೊರತಾಗಿಯೂ, ಭಾರತವು 2020–21 ಹಣಕಾಸು ವರ್ಷದಲ್ಲಿ ಅತಿ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆಯನ್ನು ಸ್ವೀಕರಿದೆ ಎಂದು ಹಣಕಾಸು ಸಚಿವರು ತಿಳಿಸಿದರು.

ಓದಿ: ಇಂಗಾಲ ಶೂನ್ಯ ಹೊರಸೂಸುವಿಕೆಗೆ ಅಭಿವೃದ್ಧಿ ಹೊಂದಿದ ದೇಶಗಳು ಕಾನೂನು ರೂಪಿಸಲಿ: ಭಾರತ

ಭಾರತ, ಕೋವಿಡ್ ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ಎದುರಿಸುವ ಜೊತೆಗೆ, ಜಾಗತಿಕ ಮಟ್ಟದಲ್ಲಿ ಈ ಸಾಂಕ್ರಾಮಿಕದ ವಿರುದ್ಧ ನಡೆದ ಹೋರಾಟದಲ್ಲೂ ಪ್ರಮುಖ ಪಾತ್ರವಹಿಸಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.