×
ADVERTISEMENT
ಈ ಕ್ಷಣ :
ADVERTISEMENT

ಲಂಡನ್‌: ಆಡಳಿತ ಪಕ್ಷದ ಸಂಸದ ಡೇವಿಡ್ ಅಮೆಸ್ಸ್ ಹತ್ಯೆ

Published : 15 ಅಕ್ಟೋಬರ್ 2021, 16:38 IST
ಫಾಲೋ ಮಾಡಿ
Comments

ಲಂಡನ್: ಬ್ರಿಟನ್‌ನ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಕನ್ಸರ್ವೇಟಿವ್ ಪಕ್ಷದ ಸಂಸದ ಡೇವಿಡ್ ಅಮೆಸ್ಸ್ ಅವರನ್ನು ಶುಕ್ರವಾರ ಅಪರಿಚಿತನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

‘ಶುಕ್ರವಾರ ತಮ್ಮ ಕ್ಷೇತ್ರದ ಮತದಾರರೊಂದಿಗೆ ಇಲ್ಲಿನ ಬೆಲ್ಫೇರ್ಸ್ ಮೆಥೋಡಿಸ್ಟ್ ಚರ್ಚ್‌ನಲ್ಲಿ ಸಭೆ ನಡೆಸುತ್ತಿದ್ದಾಗ, ಸಭೆಯಲ್ಲಿ ಪಾಲ್ಗೊಂಡಿದ್ದ ಆಪರಿಚಿತನೊಬ್ಬ ಇದ್ದಕ್ಕಿದ್ದಂತೆ ಸಂಸದ ಡೇವಿಡ್ ಮೇಲೆ ದಾಳಿ ನಡೆಸಿ ಚಾಕುವಿನಿಂದ ಹಲವು ಬಾರಿ ಇರಿದು ಹತ್ಯೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದ ಡೇವಿಡ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾದರು. ಘಟನೆ ಸಂಬಂಧ 25 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ತಿಳಿಸಿರುವ ಪೊಲೀಸರು ದಾಳಿಕೋರನ ಹೆಸರು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ಡೇವಿಡ್ ಅವರು ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಮತದಾರರದೊಂಗೆ ಸಭೆ ನಡೆಸುತ್ತಿದ್ದರು.

ಲಂಡನ್ (ಎಎಫ್‌ಪಿ): ಬ್ರಿಟನ್‌ನ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಕನ್ಸರ್ವೇಟಿವ್ ಪಕ್ಷದ ಸಂಸದ ಡೇವಿಡ್ ಅಮೆಸ್ಸ್ ಅವರನ್ನು ಶುಕ್ರವಾರ ಅಪರಿಚಿತನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT