ಬಿಎಸ್ಎಫ್ ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಣೆ; ಪಂಜಾಬ್ನಲ್ಲಿ ಭಾರಿ ವಿರೋಧ
ಗಡಿ ಭದ್ರತಾ ಪಡೆಗೆ (ಬಿಎಸ್ಎಫ್) ಕಾರ್ಯಾಚರಣೆಯ ವ್ಯಾಪ್ತಿ ವಿಸ್ತರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪಂಜಾಬ್ ರಾಜ್ಯಪಾಲರ ನಿವಾಸದತ್ತ ಪ್ರತಿಭಟನೆ ನಡೆಸಲು ಯತ್ನಿಸಿದ ಶಿರೋಮಣಿ ಅಕಾಲಿ ದಳದ (ಎಸ್ಎಡಿ) ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ಕೆಲವು ಹೊತ್ತು ಬಂಧನದಲ್ಲಿರಿಸಿ ಬಿಡುಗಡೆಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Last Updated 14 ಅಕ್ಟೋಬರ್ 2021, 16:26 IST