ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ
ಪ್ರಜಾವಾಣಿ ವಾರ್ತೆ
ಕೆ.ಆರ್.ಪುರ: ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಕೆ.ಆರ್.ಪುರ ಸಮೀಪದ ಗರುಡಚಾರಪಾಳ್ಯದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರದಂದು ಚಾಲನೆ ನೀಡಿ ಮಾತನಾಡಿದರು.Last Updated 20 ಜನವರಿ 2022, 19:36 IST