ಲಖಿಂಪುರ ಖೇರಿ ಪ್ರಕರಣ: ನ್ಯಾಯಕ್ಕಾಗಿ ರೈತರಿಂದ 'ರೈಲ್ ರೋಕೊ' ಪ್ರತಿಭಟನೆ
ಚಂಡೀಗಡ: ಪಂಜಾಬ್ನಲ್ಲಿ ರೈತರು ಸೋಮವಾರ ರೈಲ್ವೆ ಹಳಿಗಳ ಮೇಲೆ ಕುಳಿತು ಆರು ಗಂಟೆಗಳ 'ರೈಲ್ ರೋಕೊ' (ರೈಲು ತಡೆ) ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸ್ಥಾನದಿಂದ ವಜಾ ಮಾಡಬೇಕು ಮತ್ತು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಒತ್ತಾಯಿಸಿದ್ದಾರೆ. ಫಿರೋಜ್ಪುರ್ ವಿಭಾಗದ ನಾಲ್ಕು ವಲಯಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿರುವುದಾಗಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.Last Updated 18 ಅಕ್ಟೋಬರ್ 2021, 8:32 IST