ಯುಪಿಯಲ್ಲಿ ಅಪ್ನಾ ದಳ, ನಿಶಾದ್ ಪಕ್ಷದ ಜೊತೆ ಬಿಜೆಪಿ ಮೈತ್ರಿ: ನಡ್ಡಾ ಘೋಷಣೆ
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಡ್ಡಾ, ರಾಜ್ಯದಲ್ಲಿನ ಮೂರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪಾಲುದಾರ ಪಕ್ಷಗಳ ಅಭ್ಯರ್ಥಿಗಳು 403 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಮರುಸ್ಥಾಪಿಸುವುದು ಸೇರಿದಂತೆ ಹಲವಾರು ವಿಷಯಗಳಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಕಾರ್ಯಕ್ಷಮತೆಯನ್ನು ಅವರು ಶ್ಲಾಘಿಸಿದರು.Last Updated 19 ಜನವರಿ 2022, 13:34 IST