ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ನಾರಾಯಣ ಗುರುಗಳ ಅಪಮಾನ: ಹರಿಪ್ರಸಾದ್
‘ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಗೆ ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸುವ ಮೂಲಕ ದೇಶದ ಶೋಷಿತ ಸಮಾಜಕ್ಕೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್, ‘ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪಿಗೆ ಕ್ಷಮೆ ಕೋರುವ ಜೊತೆಗೆ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಮೆರವಣಿಗೆಯಲ್ಲಿ ಸೇರ್ಪಡೆಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.Last Updated 16 ಜನವರಿ 2022, 9:08 IST