ಇ–ಶ್ರಮ ಪೋರ್ಟಲ್: 4 ಕೋಟಿಗೂ ಅಧಿಕ ಅಸಂಘಟಿತ ಕಾರ್ಮಿಕರು ನೋಂದಣಿ
ನವದೆಹಲಿ: ಇ-ಶ್ರಮ ಗುರುತಿನ ಚೀಟಿಗಾಗಿ ಪೋರ್ಟಲ್‌ನಲ್ಲಿ 4 ಕೋಟಿ ಕಾರ್ಮಿಕರು ನೋಂದಾಯಿಸಿಕೊಂಡಿರುವುದಾಗಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಭಾನುವಾರ ಹೇಳಿದೆ. ದೇಶದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇ–ಶ್ರಮ ಜಾರಿಗೆ ತಂದಿದೆ. ಕಟ್ಟಡ ಕಾರ್ಮಿಕರು, ವಸ್ತ್ರ ತಯಾರಿ, ಮೀನುಗಾರಿಕೆ, ಬೀದಿಬದಿ ವ್ಯಾಪಾರಿಗಳು, ಮನೆ ಕೆಲಸದವರು, ಕೃಷಿ ಮತ್ತು ಸಂಬಂಧಿತ ಕಾರ್ಮಿಕರು, ಸಾರಿಗೆ ವಲಯದ ಕಾರ್ಮಿಕರು ಇ–ಶ್ರಮ ಪೋರ್ಟಲ್‌ನಲ್ಲಿ ನೋಂದಾಯಿಸಿದ್ದಾರೆ. ಪೋರ್ಟಲ್‌ನಲ್ಲಿ ನೋಂದಣಿ ಆರಂಭಿಸಿ ಎರಡು ತಿಂಗಳಿಗೂ ಕಡಿಮೆ ಅವಧಿಯಲ್ಲಿ ನೋಂದಾಯಿತರ ಸಂಖ್ಯೆ ನಾಲ್ಕು ಕೋಟಿ ದಾಟಿರುವುದಾಗಿ ಕಾರ್ಮಿಕ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.Last Updated 17 ಅಕ್ಟೋಬರ್ 2021, 7:18 IST