ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಘೋಷಣೆ ಮಾಡಿದ್ದೆ. ಅದನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ.
ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ
ರಾಜ್ಯದಾದ್ಯಂತ ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, 140 ಸೀಟುಗಳನ್ನು ಪಡೆದು ಸರ್ಕಾರ ರಚಿಸಲಿದ್ದೇವೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಸ್ಪಷ್ಟ ಬಹುಮತ ಬಂದ ಬಳಿಕ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದರು.
ರಾಹುಲ್ ದೇಶದ ಕ್ಷಮೆ ಕೇಳಲಿ
ವಿದೇಶಕ್ಕೆ ತೆರಳಿದ ಸಂದರ್ಭದಲ್ಲಿ ಭಾರತವನ್ನು ಟೀಕಿಸುವುದು ರಾಹುಲ್ ಗಾಂಧಿ ಅವರ ಚಾಳಿಯಾಗಿದೆ. ಅದನ್ನು ತಿದ್ದಿಕೊಳ್ಳಬೇಕು. ಹಾಗೆ ಮಾತನಾಡಿದ್ದರ ಬಗ್ಗೆ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಸ್ವಲ್ಪದರಲ್ಲೇ ಅನಾಹುತ ತಪ್ಪಿದೆ. ಜೇವರ್ಗಿ ಪಟ್ಟಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಅವರು ಹೆಲಿಕಾಪ್ಟರ್ನಲ್ಲಿ ಇಂದು (ಮಾ. 06) ಆಗಮಿಸಿದರು. #BSYediyurappa#politics#BJP#helicopterpic.twitter.com/OfcFGMLzmX