ನವದೆಹಲಿ: ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವಂತೆ ಒತ್ತಾಯಿಸಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಿರಿಯ ನಾಯಕಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರು ಇಂದು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ತೃಣಮೂಲ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪಕ್ಷಗಳ ನಾಯಕರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ನಡೆಯುವ ಈ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿಯೂ ಆಗಿರುವ ಕವಿತಾ ಅವರು ನಿನ್ನೆ 18 ಪಕ್ಷಗಳು ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ ಈ ಹೋರಾಟಕ್ಕೆ ಬೆಂಬಲ ಸೂಚಿಸಿಲ್ಲ.

‘ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುವ ಕುರಿತು ಮಾರ್ಚ್ 2 ರಂದು ಘೋಷಿಸಿದ್ದೆ. ಮಾರ್ಚ್ 9 ರಂದು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿದೆ. ಮಾರ್ಚ್ 16 ಕ್ಕೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿರುವೆ. ಆದರೆ ಇ.ಡಿ ಒಪ್ಪಿಲ್ಲ. ಹೀಗಾಗಿ ಇಂದು ಸತ್ಯಾಗ್ರಹ ಮುಗಿಸಿ ನಾಳೆ ವಿಚಾರಣೆಗೆ ಹಾಜರಾಗುವೆ’ ಎಂದು ಕವಿತಾ ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ನಾಳೆ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲಿದೆ.

ಮಹಿಳಾ ಮೀಸಲಾತಿ ವಿಧೇಯಕ ಕುರಿತು ಮಾತನಾಡಿದ ಕವಿತಾ, 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಈ ವಿಧೇಯಕ ಜಾರಿಗೆ ತರುವುದಾಗಿ ಭರವಸೆ ನೀಡಿತ್ತು, ಆದರೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೂ ಮಾತನ್ನು ಉಳಿಸಿಕೊಂಡಿಲ್ಲ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.